ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಬೋಟ್ ಮುಳುಗಡೆ: ಮೀನುಗಾರರಿಂದ 8 ಜನರ ರಕ್ಷಣೆ

Prasthutha|

ಮಂಗಳೂರು: ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ತುಂಬಿದ ಮಂಜಿ ಬೋಟ್ ಸಮುದ್ರದಲ್ಲಿ ಮುಳುಗಡೆ ಆಗಿದೆ. ಅನ್ನ, ನೀರಿಲ್ಲದೇ ಸಮುದ್ರದಲ್ಲಿ ಮೂರು ದಿನ ಕಳೆದ ಮಂಜಿ ಬೋಟ್ ನಲ್ಲಿದ್ದ ಸಿಬ್ಬಂದಿಗಳನ್ನು ಮೀನುಗಾರರು ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ.

- Advertisement -


ಮಾ.12ರಂದು ಮಂಗಳೂರಿನಿಂದ ಜಲ್ಲಿ, ಸಿಮೆಂಟ್ ಇನ್ನಿತರೆ ಸಾಮಗ್ರಿ ಹೊತ್ತು ತೆರಳಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ಸಮುದ್ರ ಮಧ್ಯೆ ಬೋಟ್ ಮುಳುಗಿದೆ. ಸಣ್ಣ ಬೋಟಿನಲ್ಲಿ ಸಮುದ್ರಕ್ಕೆ ಹಾರಿ ಮಂಜಿಯ ಕ್ಯಾಪ್ಟನ್ ಮತ್ತು ಸಿಬ್ಬಂದಿ ಜೀವ ಉಳಿಸಿಕೊಂಡಿದ್ದಾರೆ.



Join Whatsapp