Home ಟಾಪ್ ಸುದ್ದಿಗಳು ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಬೋಟ್ ಮುಳುಗಡೆ: ಮೀನುಗಾರರಿಂದ 8 ಜನರ ರಕ್ಷಣೆ

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಬೋಟ್ ಮುಳುಗಡೆ: ಮೀನುಗಾರರಿಂದ 8 ಜನರ ರಕ್ಷಣೆ

ಮಂಗಳೂರು: ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ತುಂಬಿದ ಮಂಜಿ ಬೋಟ್ ಸಮುದ್ರದಲ್ಲಿ ಮುಳುಗಡೆ ಆಗಿದೆ. ಅನ್ನ, ನೀರಿಲ್ಲದೇ ಸಮುದ್ರದಲ್ಲಿ ಮೂರು ದಿನ ಕಳೆದ ಮಂಜಿ ಬೋಟ್ ನಲ್ಲಿದ್ದ ಸಿಬ್ಬಂದಿಗಳನ್ನು ಮೀನುಗಾರರು ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ.


ಮಾ.12ರಂದು ಮಂಗಳೂರಿನಿಂದ ಜಲ್ಲಿ, ಸಿಮೆಂಟ್ ಇನ್ನಿತರೆ ಸಾಮಗ್ರಿ ಹೊತ್ತು ತೆರಳಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ಸಮುದ್ರ ಮಧ್ಯೆ ಬೋಟ್ ಮುಳುಗಿದೆ. ಸಣ್ಣ ಬೋಟಿನಲ್ಲಿ ಸಮುದ್ರಕ್ಕೆ ಹಾರಿ ಮಂಜಿಯ ಕ್ಯಾಪ್ಟನ್ ಮತ್ತು ಸಿಬ್ಬಂದಿ ಜೀವ ಉಳಿಸಿಕೊಂಡಿದ್ದಾರೆ.

Join Whatsapp
Exit mobile version