ಬೋಟ್ ದುರಂತ | ಮತ್ತೆ ಇಬ್ಬರ ಮೃತದೇಹ ಪತ್ತೆ | ಇನ್ನಿಬ್ಬರಿಗಾಗಿ ಮುಂದುವರಿದಿದೆ ಶೋಧ

Prasthutha: December 2, 2020

ಮಂಗಳೂರು : ಮೀನುಗಾರಿಕಾ ಬೋಟ್ ದುರಂತದಲ್ಲಿ ನಾಪತ್ತೆಯಾಗಿದ್ದ ಆರು ಮಂದಿಯ ಪೈಕಿ, ಮತ್ತಿಬ್ಬರ ಮೃತದೇಹ ಇಂದು ಪತ್ತೆಯಾಗಿದ್ದು, ಇಲ್ಲಿವರೆಗೆ ನಾಲ್ಕು ಮೃತದೇಹಗಳು ಪತ್ತೆಯಾಗಿವೆ.

ಇಂದು ಪತ್ತೆಯಾದವರನ್ನು ಚಿಂತನ್ ಮತ್ತು ಹಸೈನಾರ್ ಎಂದು ಗುರುತಿಸಲಾಗಿದೆ. ಇನ್ನೂ ಪತ್ತೆಯಾಗದ ಅನ್ಸಾರ್ ಮತ್ತು ಝಿಯಾವುಲ್ಲಾಗೆ ಶೋಧ ಕಾರ್ಯ ಮುಂದುವರಿದಿದೆ.

ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಉಳ್ಳಾಲ ಮೂಲಕ ಶ್ರೀ ರಕ್ಷಾ ಬೋಟ್ ಸೋಮವಾರ ಸಮುದ್ರದಲ್ಲಿ ದುರಂತಕ್ಕೀಡಾಗಿತ್ತು. ಬೋಟ್ ನಲ್ಲಿದ್ದ 22 ಮಂದಿಯಲ್ಲಿ 16 ಮಂದಿ ಪಾರಾಗಿದ್ದರು. ಆರು ಮಂದಿಯ ಪತ್ತೆಗಾಗಿ ಕಾರ್ಯ ಮುಂದುವರೆದಿತ್ತು. ನಿನ್ನೆ ಇಬ್ಬರ ಮೃತದೇಹ ಮಾತ್ರ ಪತ್ತೆಯಾಗಿತ್ತು. ಹೀಗಾಗಿ ಆಕ್ರೋಶಗೊಂಡಿದ್ದ ಮೀನುಗಾರರು ಮಧ್ಯರಾತ್ರಿ ಪ್ರತಿಭಟನೆ ನಡೆಸಿದ್ದರು.  

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ