ಚರಂಡಿ ಪಕ್ಕದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

Prasthutha|

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ

- Advertisement -

ಬೀದರ್: ಜಿಲ್ಲೆಯ ಚಿಟಗುಪ್ಪ ತಾಲೂಕಿನಲ್ಲಿ ಇಂದು (ಜುಲೈ 25) ಚರಂಡಿ ಪಕ್ಕದಲ್ಲಿ ನವಜಾತು ಶಿಶುವಿನ ಶವ ಪತ್ತೆಯಾಗಿದೆ. ಹುಲಸೂರ ತಾಲೂಕಿನಲ್ಲಿ ನಿನ್ನೆಯಷ್ಟೇ ಹೆಣ್ಣು ಶಿಶುವಿನ ಭ್ರೂಣ ಪತ್ತೆಯಾಗಿತ್ತು.

ಚಿಟಗುಪ್ಪ ತಾಲೂಕಿನ ಸಿಂಧನಕೇರಾ ಗ್ರಾಮದ ಬಸವೇಶ್ವರ ವೃತ್ತದ ಬಳಿ ಇರುವ ಚರಂಡಿ ಪಕ್ಕದಲ್ಲಿ ಪತ್ತೆಯಾಗಿದೆ. ಇದನ್ನು ನೋಡಿದ ಸ್ಥಳೀಯರು ಚಿಟಗುಪ್ಪ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತಪ್ಪಿತಸ್ಥರನ್ನು ಪತ್ತೆಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

- Advertisement -

ಜಿಲ್ಲೆಯ ಹುಲಸೂರ ತಾಲೂಕಿನ ಗುತ್ತಿ ಗ್ರಾಮದ ರಸ್ತೆಯೊಂದರ ಪಕ್ಕದಲ್ಲಿ ಹೆಣ್ಣು ಮಗುವಿನ ಭ್ರೂಣ ಹತ್ಯೆ ಮಾಡಿ ಎಸೆಯಲಾಗಿತ್ತು. ಹೊಟ್ಟೆಯಲ್ಲಿ ಬೆಳೆಯುತ್ತಿರುವ ಮಗು ಹೆಣ್ಣು ಮಗು ಎಂದು ತಿಳಿದು ಭ್ರೂಣ ಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಹುಲಸೂರು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Join Whatsapp