ಮೇದಕ್ (ತೆಲಂಗಾಣ): ಸ್ಥಳೀಯ ಬಿಜೆಪಿ ಮುಖಂಡ ಮತ್ತು ಉದ್ಯಮಿ ವಿ.ಶ್ರೀನಿವಾಸ್ ಪ್ರಸಾದ್ ಅವರ ಮೃತದೇಹ ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಘಟನೆ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಚಂದನಾ ದೀಪ್ತಿ, ದುಷ್ಕರ್ಮಿಗಳು ಬಿಜೆಪಿ ಮುಖಂಡನನ್ನು ಕಾರಿನ ಡಿಕ್ಕಿಯಲ್ಲಿ ಕೂಡಿ ಹಾಕಿ ಲಾಕ್ ಮಾಡಿ ಬೆಂಕಿ ಹಚ್ಚಿದ್ದಾರೆ. ಬಿಜೆಪಿ ಮುಖಂಡನ ಮೃತದೇಹ ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.