Home ಟಾಪ್ ಸುದ್ದಿಗಳು ಕೈಕಾಲು ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ರೈತರ ಪ್ರತಿಭಟನಾ ಸ್ಥಳದಲ್ಲಿ ಪತ್ತೆ

ಕೈಕಾಲು ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ರೈತರ ಪ್ರತಿಭಟನಾ ಸ್ಥಳದಲ್ಲಿ ಪತ್ತೆ

ಲಕ್ನೋ: ಮಣಿಕಟ್ಟು ಕತ್ತರಿಸಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ರೈತರ ಪ್ರತಿಭಟನಾ ಸ್ಥಳದ ಬಳಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಸುಮಾರು 35 ಪ್ರಾಯದವರಾಗಿದ್ದು, ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನಾ ಸ್ಥಳದ ಬಳಿ ಲೋಹದ ತಡೆಗೋಡೆಗೆ ಕಟ್ಟಿರುವುದು ಕಂಡುಬಂದಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ತದ ತನಿಖೆಗೆ ರೈತರು ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳು ಕುಂಡ್ಲಿ ಪೊಲೀಸ್ ಠಾಣೆಗೆ ಇಂದು ಬೆಳಗ್ಗೆ 5 ಗಂಟೆಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಮೃತರು ಶಾರ್ಟ್ಸ್ ಧರಿಸಿರುವುದು ಕಂಡುಬಂದಿದೆ.

ಈ ಕೃತ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ, ದುಷ್ಕರ್ಮಿಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ ಎಂದು ರೋಹ್ಟಕ್ ವಿಭಾಗದ ಐಜಿ ಸಂದೀಪ್ ಖಿರ್ವಾರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಪ್ರಸಕ್ತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋನಿಪತ್ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.

Join Whatsapp
Exit mobile version