ಅಪೌಷ್ಟಿಕತೆ ನಿವಾರಿಸಲು 7 ಜಿಲ್ಲೆಗಳ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ

Prasthutha|

ಬೆಂಗಳೂರು: ಅಪೌಷ್ಟಿಕತೆ, ರಕ್ತಹೀನತೆ ಹೊಂದಿರುವ ಶಾಲಾ ಮಕ್ಕಳ ಶೇಕಡಾವಾರು ಪ್ರಮಾಣ ಹೆಚ್ಚಾಗಿ ಇರುವ ರಾಜ್ಯದ 7 ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆಗಳ 1 ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ, ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

- Advertisement -


ಬೀದರ್, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳ ಒಟ್ಟು 14,44,322 ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಪ್ರತೀ ತಿಂಗಳು 12 ಮೊಟ್ಟೆ, ಮೊಟ್ಟೆ ಸೇವಿಸದವರಿಗೆ ಬಾಳೆಹಣ್ಣು ನೀಡಲು ತೀರ್ಮಾನಿಸಲಾಗಿದೆ. ಡಿಸೆಂಬರ್ ತಿಂಗಳಿನಿಂದ 2022ರ ಮಾರ್ಚ್ ಅಂತ್ಯದವರೆಗೆ ಒಟ್ಟು 4 ತಿಂಗಳು ಯೋಜನೆ ಜಾರಿಯಲ್ಲಿರಲಿದೆ. ಅಪೌಷ್ಟಿಕತೆ, ರಕ್ತಹೀನತೆ ಹೊಂದಿರುವ ಶಾಲಾ ಮಕ್ಕಳ ಶೇಕಡಾವಾರು ಪ್ರಮಾಣ ಯಾದಗಿರಿಯಲ್ಲಿಶೇ.74, ಕಲಬುರಗಿಯಲ್ಲಿ ಶೆ. 72.4, ಬಳ್ಳಾರಿ ಶೇ.72.3, ಕೊಪ್ಪಳ ಶೇ.70.7, ರಾಯಚೂರು ಶೇ.70.6, ಬೀದರ್ ಶೇ.69.1, ವಿಜಯಪುರ ಶೇ.68 ರಷ್ಟಿದೆ.


6ರಿಂದ 15 ವರ್ಷ ವಯೋಮಾನದವರೆಗಿನ ವಿದ್ಯಾರ್ಥಿಗಳ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಪೋಷಾಕಾಂಶಗಳ ಕೊರತೆ ನಿವಾರಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ.

Join Whatsapp