ನಂದಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಕಾರ್ಮಿಕರಿಗೆ ಗಾಯ

Prasthutha|

ವಿಜಯಪುರ: ಇಲ್ಲಿನ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನೂತನವಾಗಿ ನಿರ್ಮಿಸಿದ್ದ ಬಾಯ್ಲರ್ ಸ್ಫೋಟಗೊಂಡು, ನಾಲ್ವರು ಕಾರ್ಮಿಕರು ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರುವ ನಂದಿ ಕಾರ್ಖಾನೆಯಲ್ಲಿ ಪುಣೆ ಮೂಲಕ ಸಂಸ್ಥೆಯೊಂದು ಇತ್ತೀಚೆಗೆ ಬಾಯ್ಲರ್ ಅಳವಡಿಸಿತ್ತು. ಅದರ ಪ್ರಾಯೋಗಿಕ ಪರೀಕ್ಷೆಯನ್ನು ಶನಿವಾರ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ಗಾಯಗೊಂಡ ಕಾರ್ಮಿಕರ ಚರ್ಮ ಸುಟ್ಟು ಹೋಗಿದ್ದು, ಈ ಸಂಬಂಧದ ವೀಡಿಯೋ ವೈರಲ್ ಆಗಿದೆ.

Join Whatsapp