ಬೋಳಿಯಾರ್ ಚೂರಿ ಇರಿತ ಪ್ರಕರಣ: ಮೂವರು ಪೊಲೀಸ್ ವಶಕ್ಕೆ

Prasthutha|

ಕೊಣಾಜೆ: ಬೋಳಿಯಾರು ಬಳಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೊಣಾಜೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -


ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಸಿಸಿ ಟಿವಿ ಫೂಟೇಜ್ ನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.


ನರೇಂದ್ರ ಮೋದಿ ಸತತ ಮೂರನೇ ಸಲ ದೇಶದ ಪ್ರಧಾನಿಯಾಗಿ ಪದಗ್ರಹಣದ ನಡೆಸಿದ್ದಕ್ಕೆ ಬಿಜೆಪಿ ಬೋಳಿಯಾರ್ ನಲ್ಲಿ ವಿಜಯೋತ್ಸವ ಮೆರವಣಿಗೆಯನ್ನು ನಡೆಸಿತ್ತು. ವಿಜಯೋತ್ಸವ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಳಿಯಾರಿನ ಸಮಾಧಾನ್ ಬಾರ್ ಮುಂಭಾಗದಲ್ಲಿ ತಂಡವೊಂದು ಹರೀಶ್ ಮತ್ತು ನಂದನ್ ಮೇಲೆ ಹಲ್ಲೆಗೈದು ಚೂರಿಯಿಂದ ಇರಿದು ಪರಾರಿಯಾಗಿದೆ ಎಂದು ವರದಿಯಾಗಿದೆ.

Join Whatsapp