ಮುಂಬೈ: ಶೂಟಿಂಗ್ ಮುಗಿಸಿ ಹಿಂದುರುಗುವ ವೇಳೆ ನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತವಾಗಿದ್ದು, ಆಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.
ನಟನ ಆಪ್ತ ವಲಯಗಳಿಂದ ಬಂದಿರುವ ಮಾಹಿತಿ ಪ್ರಕಾರ, 47 ವರ್ಷದ ಶ್ರೇಯಸ್ ತಲ್ಪಾಡೆ ಬಾಲಿವುಡ್ ‘ವೆಲ್ಕಮ್ ಟು ದ ಜಂಗಲ್’ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ನಿನ್ನೆಯ ಚಿತ್ರೀಕರಣ ಮುಗಿದ ನಂತರ ನಟನಿಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ತಕ್ಷಣ ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಬೆಲ್ಲೆ ವ್ಯೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೇಯಸ್ ಗೆ ಆಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಚಿಕಿತ್ಸೆ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.