ಬೆಂಗಳೂರು: ಬಾಲಿವುಡ್ ನಟಿ ನೇಹಾ ಶರ್ಮಾ ಅವರು ಬಿಹಾರದ ಬಾಗಲ್ಪುರ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ನೇಹಾ ಶರ್ಮಾ ಅವರ ತಂದೆ ಬಿಹಾರದ ಕಾಂಗ್ರೆಸ್ ನಾಯಕ ಹಾಗೂ ಬಾಗಲ್ಪುರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಜಿತ್ ಶರ್ಮಾ ಅವರಿಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಒತ್ತಡವಿದೆ.
ಆದರೆ ಮಾಧ್ಯಮಗಳ ಜೊತೆ ಈ ಕುರಿತು ಮಾತನಾಡಿರುವ ಅವರು, ನಾನು ಈಗಾಗಲೇ ಶಾಸಕನಿದ್ದೇನೆ. ಕಾಂಗ್ರೆಸ್ ಟಿಕೆಟ್ ಕೊಟ್ಟರೆ ನನ್ನ ಮಗಳು ನೇಹಾ ಸ್ಪರ್ಧಿಸಲಿದ್ದಾಳೆ ಎಂದು ತಿಳಿಸಿದ್ದಾರೆ.
ಸದ್ಯ ಬಾಗಲ್ಪುರ್ ಲೋಕಸಭಾ ಕ್ಷೇತ್ರ ಜೆಡಿಯು ವಶದಲ್ಲಿದೆ.
ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಆರ್ ಜೆಡಿ ಕೂಡ ಈ ಕ್ಷೇತ್ರ ತಮಗೆ ಬೇಕು ಎಂದು ಕೇಳುತ್ತಿದೆ. ಆದರೆ, ಅಜಿತ್ ಶರ್ಮಾ ಅವರು ಈ ಕ್ಷೇತ್ರವನ್ನು ಕಾಂಗ್ರೆಸ್ ಗೆ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ.