ಬಾಲಿವುಡ್’ನ ಹಿರಿಯ ನಟಿ ಸುಲೋಚನಾ ಲಾತ್ಕರ್ ನಿಧನ

Prasthutha|

ನವದೆಹಲಿ: ಬಾಲಿವುಡ್ ನ ಹಿರಿಯ ನಟಿ ಸುಲೋಚನಾ ಲಾತ್ಕರ್ ನಿಧನರಾಗಿದ್ದಾರೆ.

- Advertisement -


ಮುಂಬೈನ ಶುಶ್ರೂಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


250ಕ್ಕೂ ಹೆಚ್ಚು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದ ಸುಲೋಚನಾ, ಹಿಂದಿಯ ಜೊತೆ ಜೊತೆಗೆ ಮರಾಠಿ ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. 1940ರಲ್ಲಿ ಮರಾಠಿ ಸಿನಿಮಾಗಳ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟ ಅವರು ನಂತರದ ದಿನಗಳಲ್ಲಿ ಹಿಂದಿ ಚಿತ್ರಗಳಲ್ಲೂ ನಟಿಸಿದರು. ಬಾಲಿವುಡ್ ದಿಗ್ಗಜರಾದ ಶಮ್ಮಿ ಕಪೂರ್, ದಿಲೀಪ್ ಕುಮಾರ್, ದೇವಾನಂದ್ ಸೇರಿದಂತೆ ಹಲವರ ಜೊತೆ ತೆರೆ ಹಂಚಿಕೊಂಡಿದ್ದಾರೆ. ದಿಲ್ ದೇಖೆ ದೇಖೋ, ಆದ್ಮಿ, ಜಾನಿ ಮೇರಾ ನಾಮ್, ಸಂಗ್ತಿ ಐಕಾ, ಪತಿವ್ರತಾ, ಜೀವಚಾ ಸಖಾ ಸೇರಿದಂತೆ ಹಲವಾರು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ ಸುಲೋಚನಾ.