ಸಾವರ್ಕರ್ ಟೀಕೆ: ಬಾಲಿವುಡ್ ನಟಿ ಸ್ವರಾ ಭಾಸ್ಕರ್’ಗೆ ಕೊಲೆ ಬೆದರಿಕೆ

Prasthutha|

ನವದೆಹಲಿ: ಸಾವರ್ಕರ್ ಬಗ್ಗೆ ಟೀಕೆ ಮಾಡಿದ್ದಕ್ಕೆ ಕೊಲೆ ಬೆದರಿಕೆ ಪತ್ರ ಬಂದಿದೆ ಎಂದು ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಮುಂಬೈನ ವೆರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

- Advertisement -

ಬೆದರಿಕೆ ಪತ್ರವನ್ನು ವರ್ಸೊವಾದಲ್ಲಿರುವ ಸ್ವರಾ ಅವರ ನಿವಾಸಕ್ಕೆ ಕಳುಹಿಸಲಾಗಿದೆ. ಸ್ವರಾ ಭಾಸ್ಕರ್ ನೀಡಿರುವ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೂರನ್ನು ಸ್ವೀಕರಿಸಿದ ನಂತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ಧೈರ್ಯವಾಗಿ ತಮ್ಮ ಅಭಿಪ್ರಾಯಗಳನ್ನು ತಿಳಿಸುವ ಕೆಲವೇ ಕೆಲವು ಸೆಲೆಬ್ರಿಟಿಗಳಲ್ಲಿ ಸ್ವರಾ ಭಾಸ್ಕರ್ ಕೂಡ ಒಬ್ಬರು. 2017 ರಲ್ಲಿ ಸ್ವರಾ ಭಾಸ್ಕರ್ ಅವರು ಟ್ವೀಟ್ ಒಂದನ್ನು ಮಾಡಿದ್ದರು. ಸಾವರ್ಕರ್ ಬ್ರಿಟಿಷ್ ಸರ್ಕಾರ ಬಳಿ ಕ್ಷಮೆಯಾಚಿಸಿದ್ದರು. ಜೈಲಿನಿಂದ ಬಿಡುವಂತೆ ಮನವಿ ಮಾಡಿದ್ದರು. ಹೀಗಾಗಿ ಅವರು ಖಚಿತವಾಗಿ ‘ವೀರ್’ ಅಲ್ಲ ಎಂದಿದ್ದರು.



Join Whatsapp