ತಮ್ಮ ಪಠ್ಯ ಕೈಬಿಡುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆದ ಬೊಳುವಾರು ಮಹಮದ್ ಕುಂಞಿ

Prasthutha|

ಮಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರುತ್ತಿದ್ದು, ಹಿರಿಯ ಸಾಹಿತಿ ಬೊಳುವಾರು ಮಹಮದ್ ಕುಂಞಿ ತಮ್ಮ ಪಠ್ಯವನ್ನು ಕೈಬಿಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿದ್ದಾರೆ.
ಬೊಳುವಾರ್ ತಮ್ಮ ಆಧಾರ್ ಕಾರ್ಡ್ ನಂ ನೀಡಿಯೇ ಕತೆಯನ್ನು ಹಿಂದೆಗೆದುಕೊಂಡಿದ್ದಾರೆ.

- Advertisement -

ಪ್ರಸಕ್ತ ಸಿರಿ ಕನ್ನಡ–ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ (ಪರಿಷ್ಕೃತ) 5 ನೇ ತರಗತಿ ಪುಸ್ತಕದ 24ನೆಯ ಪುಟದಲ್ಲಿರುವ, ‘ಸುಳ್ಳು ಹೇಳಬಾರದು’ ಎಂಬ ಹೆಸರಿನ ನನ್ನ ಪುಟ್ಟ ಕತೆಯೊಂದರ ಆಶಯಗಳು, ಪ್ರಸಕ್ತ ವರ್ಷದಲ್ಲಿ ಪರಿಷ್ಕೃತಗೊಂಡಿರುವ/ಗೊಳ್ಳಲಿರುವ ಇತರ ಕೆಲವು ಪಠ್ಯಗಳ ಆಶಯಗಳೊಂದಿಗೆ ಸರಿಯಾಗಿ ಹೊಂದಿಕೆಯಾಗದಿರುವ ಸಾಧ್ಯತೆಗಳಿರುವುದರಿಂದ, ನಮ್ಮ ಪುಟ್ಟ ಮಕ್ಕಳು ಗೊಂದಲಕ್ಕೊಳಗಾಗುವ ಸಾಧ್ಯತೆ ಇದ್ದು, ಆದ್ದರಿಂದ, ದಯವಿಟ್ಟು ‘ಸುಳ್ಳು ಹೇಳಬಾರದು’ ಎಂಬ ಈ ನನ್ನ ಕತೆಯನ್ನು ಕಿತ್ತು ಹಾಕಿ, ಪರಿಷ್ಕೃತ ಪಠ್ಯ ಕ್ರಮದ ಆಶಯಗಳಿಗೆ ಹೊಂದಿಕೊಳ್ಳುವ ಬೇರೊಂದು ಪಠ್ಯವನ್ನು ಸೇರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Join Whatsapp