ಬೆಂಗಳೂರು: ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಇ-ಮೇಲ್ ಬೆದರಿಕೆ ಕೇಳಿಬಂದ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಇಲಾಖೆ ತೀವ್ರ ತಪಾಸಣೆ ಕೈಗೊಂಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅವರು, ಈಗಾಗಲೇ ಬೆದರಿಕೆ ಇ-ಮೇಲ್ ಮಾಡಲಾಗಿದ್ದ ಶಾಲೆಗಳಿಗೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಬಾಂಬ್ ಪತ್ತೆ ಸಿಬ್ಬಂದಿ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು ನಗರದ ಕೆಲವು ಶಾಲೆಗಳಿಗೆ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ನಮಗೆ ಮಾಹಿತಿ ಬಂದಕೂಡಲೇ ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ಶಾಲೆಗಳಿಗೆ ನಮ್ಮ ಬಾಂಬ್ ನಿಷ್ಕ್ರಿಯ ದಳ ಹೋಗಿ ತಪಾಸಣೆ ನಡೆಸಿದೆ ಎಂದು ಹೇಳಿದ್ದಾರೆ.