ನವದೆಹಲಿ: ರಷ್ಯಾದ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದರಿಂದ ಗುಜರಾತ್ನ ಜಾಮ್ನಗರದ ಭಾರತೀಯ ವಾಯುನೆಲೆಯಲ್ಲಿ ತುರ್ತು ಲ್ಯಾಂಡ್ ಮಾಡಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ವಿಮಾನದಲ್ಲಿ 236 ಪ್ರಯಾಣಿಕರು ಹಾಗೂ 8 ಮಂದಿ ವಿಮಾನ ಸಿಬ್ಬಂದಿ ಸಹಿತ ಒಟ್ಟು 244 ಮಂದಿ ಪ್ರಯಾಣಿಸುತ್ತಿದ್ದರು. ವಾಯು ಸಂಚಾರ ನಿಯಂತ್ರಣ ಕೊಠಡಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಹೀಗಾಗಿ ಜಾಮ್ ನಗರದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ವಿಮಾನವನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಏರ್‌ಪೋರ್ಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಯಾಣಿಕರು ಹಾಗೂ ವಿಮಾನ ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ವಿಮಾನವನ್ನು ಪರಿಶೀಲನೆ ನಡೆಸಿದ್ದಾರೆ‘ ಎಂದು ರಾಜ್‌ಕೋಟ್ ಹಾಗೂ ಜಾಮ್ನಗರ ವಲಯದ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಶೋಕ್ ಕುಮಾರ್ ಯಾದವ್ ತಿಳಿಸಿದ್ದಾರೆ.