Home ಟಾಪ್ ಸುದ್ದಿಗಳು ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ ಕರೆ: ಆರೋಪಿ ಸುಭಾಷ್ ಗುಪ್ತ ಬಂಧನ

ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ ಕರೆ: ಆರೋಪಿ ಸುಭಾಷ್ ಗುಪ್ತ ಬಂಧನ

►►ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದ ಯುವಕನೊಬ್ಬನನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.


ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೊದಲ್ಲಿ ಹಿಂದೆ ಕೆಲಸ ಮಾಡಿದ್ದ ಸುಭಾಷ್ ಗುಪ್ತ ಬಂಧಿತ ಆರೋಪಿಯಾಗಿದ್ದಾನೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬಾವನ ಮೇಲಿನ ಕೋಪಕ್ಕೆ ಆರೋಪಿಯು ಹುಸಿ ಬಾಂಬ್ ಕರೆ ಮಾಡಿದ್ದ ಎಂದು ಪೊಲೀಸ್ ವಿಚಾರಣೆಯಲ್ಲಿ ಪತ್ತೆಯಾಗಿದೆ.


ಬಾವನ ಹೆಸರೇಳಿ ಕರೆ ಕಂಟ್ರೋಲ್ ರೂಂ ಗೆ ಕರೆ ಮಾಡಿ ಬಾಂಬ್ ಬೆದರಿಕೆ ಹಾಕಿದ್ದ ಸುಭಾಷ್ ನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಬಾಂಬ್ ಕರೆ ಹಿನ್ನೆಲೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಪೊಲೀಸ್ ನಿಯಂತ್ರಣ ಕೊಠಡಿಗೆ ಇಂದು ಮುಂಜಾನೆ 3.30ರ ವೇಳೆ ದುಷ್ಕರ್ಮಿ ಕರೆ ಮಾಡಿದ್ದು, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾನೆ.


ಈ ಹಿನ್ನೆಲೆಯಲ್ಲಿ ಏರ್ಲೈನ್ಸ್ ಗೇಟ್, ಟರ್ಮಿನಲ್ ಮತ್ತು ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಸಲಾಗಿತ್ತು. ಬಾಂಬ್ ನಿಷ್ಟ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ಧಾವಿಸಿ ವಿಮಾನ ನಿಲ್ದಾಣದ ಇಂಚಿಂಚೂ ತಪಾಸಣೆ ನಡೆಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಬಳಿಕ ಇದೊಂದು ಹುಸಿ ಕರೆ ಎಂದು ಘೋಷಿಸಲಾಯಿತು. ಬಳಿಕ ತನಿಖೆ ಕೈಗೊಂಡಾಗ ಆರೋಪಿ ಸುಭಾಷ್ ಪೊಲೀಸರ ಬಲೆಗೆ ಬಿದ್ದಿದ್ದಾನೆ.

Join Whatsapp
Exit mobile version