ಬೆಂಗಳೂರಿನ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್

Prasthutha|

ಬೆಂಗಳೂರು: ನಗರದ ದಕ್ಷಿಣ ವಿಭಾಗದ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕಾಲೇಜು ಆವರಣದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇ–ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸರು ತಿಳಿಸಿದರು.

- Advertisement -


ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಎಂಎಸ್ ಕಾಲೇಜು, ವಿ.ವಿ.ಪುರಂನಲ್ಲಿರುವ ಬಿಐಟಿ ಕಾಲೇಜು ಸೇರಿದಂತೆ ಕೆಲವು ಕಾಲೇಜುಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರ ಬಂದಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕಿಯ ಸಿಬ್ಬಂದಿ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.



Join Whatsapp