ದೆಹಲಿಯಿಂದ ಪುಣೆಗೆ ಹೊರಡಬೇಕಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

Prasthutha|

ನವದೆಹಲಿ: ದೆಹಲಿಯಿಂದ ಪುಣೆಗೆ ಹೊರಟಿದ್ದ ವಿಸ್ತಾರಾ UK971 ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಬೆಳಗ್ಗೆ 7:30ರ ಸುಮಾರಿಗೆ ಬೋರ್ಡಿಂಗ್ ಪ್ರಗತಿಯಲ್ಲಿದ್ದಾಗ ಜಿಎಂಆರ್ ಕಾಲ್ ಸೆಂಟರ್ ಗೆ ಕರೆ ಮಾಡಿರುವ ಅಪರಿಚಿತರು ಬಾಂಬ್ ಬೆದರಿಕೆ ಒಡ್ಡಿದ್ದಾರೆ.

- Advertisement -


ಕರೆ ಬೆನ್ನಲ್ಲೆ ಬೋರ್ಡಿಂಗ್ ನಿಲ್ಲಿಸಿ, ಪ್ರತ್ಯೇಕವಾದ ಸ್ಥಳದಲ್ಲಿ ವಿಮಾನದ ತಪಾಸಣೆ ಮಾಡಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಮತ್ತು ವಿಶೇಷ ಭದ್ರತಾ ತಂಡಗಳು ವಿಮಾನ ಪರಿಶೀಲನೆ ಮಾಡಿದ್ದು ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ವಕ್ತಾರರು ತಿಳಿಸಿದ್ದಾರೆ. ಈ ನಡುವೆ ಎಲ್ಲಾ ಪ್ರಯಾಣಿಕರು ಮತ್ತು ಅವರ ಲಗೇಜುಗಳನ್ನು ಸುರಕ್ಷಿತವಾಗಿಡಲಾಗಿದೆ

Join Whatsapp