Home ಟಾಪ್ ಸುದ್ದಿಗಳು ದೆಹಲಿಯಿಂದ ಪುಣೆಗೆ ಹೊರಡಬೇಕಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

ದೆಹಲಿಯಿಂದ ಪುಣೆಗೆ ಹೊರಡಬೇಕಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

ನವದೆಹಲಿ: ದೆಹಲಿಯಿಂದ ಪುಣೆಗೆ ಹೊರಟಿದ್ದ ವಿಸ್ತಾರಾ UK971 ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಬೆಳಗ್ಗೆ 7:30ರ ಸುಮಾರಿಗೆ ಬೋರ್ಡಿಂಗ್ ಪ್ರಗತಿಯಲ್ಲಿದ್ದಾಗ ಜಿಎಂಆರ್ ಕಾಲ್ ಸೆಂಟರ್ ಗೆ ಕರೆ ಮಾಡಿರುವ ಅಪರಿಚಿತರು ಬಾಂಬ್ ಬೆದರಿಕೆ ಒಡ್ಡಿದ್ದಾರೆ.


ಕರೆ ಬೆನ್ನಲ್ಲೆ ಬೋರ್ಡಿಂಗ್ ನಿಲ್ಲಿಸಿ, ಪ್ರತ್ಯೇಕವಾದ ಸ್ಥಳದಲ್ಲಿ ವಿಮಾನದ ತಪಾಸಣೆ ಮಾಡಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಮತ್ತು ವಿಶೇಷ ಭದ್ರತಾ ತಂಡಗಳು ವಿಮಾನ ಪರಿಶೀಲನೆ ಮಾಡಿದ್ದು ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ವಕ್ತಾರರು ತಿಳಿಸಿದ್ದಾರೆ. ಈ ನಡುವೆ ಎಲ್ಲಾ ಪ್ರಯಾಣಿಕರು ಮತ್ತು ಅವರ ಲಗೇಜುಗಳನ್ನು ಸುರಕ್ಷಿತವಾಗಿಡಲಾಗಿದೆ

Join Whatsapp
Exit mobile version