ಮುಂಬೈ: ವಿಮಾನಯಾನ ಸಂಸ್ಥೆಗಳು ಮತ್ತು ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಹಾರಾಷ್ಟ್ರದ ಗೊಂಡಿಯಾ ಮೂಲದ ಜಗದೀಶ್ ಉಯ್ಕೆ (35) ಎಂದು ಗುರುತಿಸಲಾಗಿದೆ.
ಆತ ವಿಮಾನಗಳಿಗೆ ಬಾಂಬ್ ಬೆದರಿಕೆ ಪ್ರಕರಣ ಹಿಂದೆ ಇದ್ದಾನೆ. ಆತ ಹಿಂದೆ ಭಯೋತ್ಪಾದನೆಯ ಬಗ್ಗೆ ಪುಸ್ತಕ ಬರೆದಿದ್ದ. ಅಲ್ಲದೇ 2021 ರಲ್ಲಿ ಪ್ರಕರಣ ಒಂದರಲ್ಲಿ ಬಂಧನಕ್ಕೊಳಗಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಕಲಿ ಇಮೇಲ್ ಗಳು ಪತ್ತೆಯಾದ ನಂತರ ಅವನನ್ನು ಗುರುತಿಸಲಾಗಿದೆ. ತನಿಖೆ ಬಳಿಕ ಇಮೇಲ್ ಗಳಿಗೆ ಇಂಗ್ಲೆಂಡ್ ನ ಲಿಂಕ್ ಮಾಡುವ ಮಾಹಿತಿ ಲಭ್ಯವಾಗಿತ್ತು. ಆತ ಪ್ರಧಾನ ಮಂತ್ರಿಗಳ ಕಚೇರಿ (PMO), ರೈಲ್ವೆ ಸಚಿವರು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ವಿಮಾನಯಾನ ಕಚೇರಿಗಳು, ಪೊಲೀಸ್ ಮಹಾನಿರ್ದೇಶಕರು (DGP) ಮತ್ತು ರೈಲ್ವೆ ರಕ್ಷಣಾ ಪಡೆ (RPF) ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಇಮೇಲ್ ಕಳುಹಿಸಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.