ವಿಧಾನಸೌಧಕ್ಕೆ ಬಾಂಬ್ ಬೆದರಿಕೆ: ಟೆಕ್ಕಿ ಬಂಧನ

Prasthutha|

ಬೆಂಗಳೂರು: ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಹಾಕಿದ ಸಾಫ್ಟ್ ವೇರ್ ಎಂಜಿನಿಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


‘ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಗೆ ಕರೆ ಮಾಡಿದ್ದ ಆರೋಪಿ, ವಿಧಾನಸೌಧದಲ್ಲಿ ಬಾಂಬ್ ಇರಿಸಲಾಗಿದೆ. ಸದ್ಯದಲ್ಲೇ ಸ್ಫೋಟಗೊಳ್ಳಲಿದೆ ಎಂದು ತಿಳಿಸಿದ್ದ. ವಿಷಯ ಗೊತ್ತಾಗುತ್ತಿದ್ದಂತೆ ಪರಿಶೀಲನೆ ನಡೆಸಿದ ಪೊಲೀಸರು ಇದೊಂದು ಹುಸಿ ಕರೆ ಎಂಬುದು ತಿಳಿಯಿತು. ನಂತರ, ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ಆರಂಭಿಸಲಾಗಿತ್ತು ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದರು.


ಹೆಬ್ಬಗೋಡಿ ನಿವಾಸಿಯಾದ 41 ವರ್ಷದ ಸಾಫ್ಟ್ ವೇರ್ ಎಂಜಿನಿಯರ್, ಬಾಂಬ್ ಬೆದರಿಕೆ ಕರೆ ಮಾಡಿದ್ದು. ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಹುಸಿ ಕರೆ ಮಾಡಲು ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp