ಬೆಂಗಳೂರು: ಶಾಲೆಗಳಿಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಕುರಿತು ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎಲ್ಲಿಂದ ಸಂದೇಶ ಬಂದಿದೆ ಎಂಬುದರ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದೇನೆ. ಎಲ್ಲಾ ಶಾಲೆಗಳಿಗೂ ಭದ್ರತೆ ಕೊಡಲು ಸೂಚನೆ ನೀಡಿದ್ದೇನೆ ಎಂದರು.