ಶಾಲೆಗಳಿಗೆ ಬಾಂಬ್ ಬೆದರಿಕೆ; ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಹುನ್ನಾರ: ಹೆಚ್ ಡಿಕೆ

Prasthutha|

ಬೆಂಗಳೂರು: ನಗರದ ಸುಮಾರು 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಸಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಹುನ್ನಾರ ಇದಾಗದೆ ಎಂದು ಹೇಳಿದ್ದಾರೆ.

- Advertisement -

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಹೆಚ್ ಡಿಕೆ, ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು.ರಾಜ್ಯ ಕಾಂಗ್ರೆಸ್ ಸರ್ಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು. ಈ ಬೆದರಿಕೆಗಳ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರ್ಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಮೀನಾಮೇಷ ಎಣಿಸಬಾರದು ಎಂದು ಬರೆದುಕೊಂಡಿದ್ದಾರೆ.

Join Whatsapp
Exit mobile version