ಮಾಲೆಗಾಂವ್‌ ಸ್ಫೋಟ| ಪ್ರಕರಣದಿಂದ ಬಿಡುಗಡೆಗೊಳಿಸಲು ಕೋರಿ ಕರ್ನಲ್ ಪುರೋಹಿತ್ ಸಲ್ಲಿಸಿದ್ದ ಅರ್ಜಿ ವಜಾ

Prasthutha|

ಮುಂಬಯಿ: 2008ರ ಮಾಲೆಗಾಂವ್‌ ಸ್ಫೋಟ ಪ್ರಕರಣದಿಂದ ಬಿಡುಗಡೆಗೊಳಿಸಲು ಕೋರಿ ಆರೋಪಿ ಲೆಫ್ಟಿನೆಂಟ್‌ ಕರ್ನಲ್‌ ಪ್ರಸಾದ್‌ ಪುರೋಹಿತ್‌ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.

- Advertisement -

ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎ.ಎಸ್‌.ಗಡ್ಕರಿ ಮತ್ತು ನ್ಯಾ. ಪ್ರಕಾಶ್‌ ನಾಯಕ್‌ ಅವರಿದ್ದ ನ್ಯಾಯ ಪೀಠವು, “ಪುರೋಹಿತ್‌ ಬಾಂಬ್‌ ಸ್ಫೋಟ ಪ್ರಕರಣದ ಚುಟುವಟಿಕೆಯಲ್ಲಿ ತೊಡಗಿದ್ದಾಗ ತಮ್ಮ ಅಧಿಕೃತ ಕರ್ತವ್ಯವನ್ನು ನಿರ್ವಹಿಸುತ್ತಿರಲಿಲ್ಲ’ ಎಂದು ಹೇಳಿತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರೋಹಿತ್‌, ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ಹಾಗೂ ಇತರ ಐವರು ವಿಚಾರಣೆ ಎದುರಿಸುತ್ತಿದ್ದಾರೆ. 2008ರ ಸೆ.29 ರಂದು ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯ ಮಾಲೆಗಾಂವ್‌ನಲ್ಲಿ ನಡೆದ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಪ್ರಕರಣದ ಎಲ್ಲ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

- Advertisement -



Join Whatsapp
Exit mobile version