ಮುಂಬೈ: ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ನಾಯಕ ಅನಿಲ್ ದೇಶ್ ಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಎನ್.ಜೆ.ಜಮಾದಾರ್ ಅವರು ಮಂಗಳವಾರ ಮಧ್ಯಾಹ್ನ ಈ ಆದೇಶವನ್ನು ಪ್ರಕಟಿಸಿದರು.
ಆದರೂ. ಭ್ರಷ್ಟಾಚಾರ ಪ್ರಕರಣದಲ್ಲಿ ದೇಶ್ ಮುಖ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸಹ ತನಿಖೆ ನಡೆಸುತ್ತಿರುವುದರಿಂದ ಅವರನ್ನು ಆರ್ಥರ್ ರಸ್ತೆ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಮುಂದುವರಿಸಲಾಗುವುದು ಎಂದು ತಿಳಿದು ಬಂದಿದೆ.
2019 ಮತ್ತು 2021 ರ ನಡುವೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪದ ಮೇಲೆ ದೇಶ್ ಮುಖ್ ಮತ್ತು ಅವರ ಸಹಚರರನ್ನು ಬಂಧಿಸಲಾಗಿತ್ತು.