ಮಾಜಿ ಗೃಹ ಸಚಿವ ಅನಿಲ್ ದೇಶ್’ಮುಖ್ ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

Prasthutha|

ಮುಂಬೈ: ಮಹಾರಾಷ್ಟ್ರದಲ್ಲಿ ಪೊಲೀಸ್ ವರ್ಗಾವಣೆ ಮತ್ತು ಪೋಸ್ಟಿಂಗ್’ನಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣವೊಂದರಲ್ಲಿ ಬಂಧಿತರಾಗಿದ್ದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್’ಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.

- Advertisement -

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಸ್.ಕಾರ್ಣಿಕ್ ಅವರ ಪೀಠವು ಈ ಆದೇಶ ನೀಡಿದೆ. ಆದರೆ ಸಿಬಿಐ ಸುಪ್ರೀಂ ಕೋರ್ಟ್ ಗೆ ಹೋಗುವುದಾಗಿ ಹೇಳಿದ್ದರಿಂದ ಅದನ್ನು 10 ದಿನಗಳ ಕಾಲ ತಡೆಹಿಡಿಯಲಾಗಿದೆ.

ಈ ಹಿಂದೆ, ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಈಗಾಗಲೇ ದೇಶ್’ಮುಖ್’ಗೆ ಜಾಮೀನು ನೀಡಿದೆ. ಆದರೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಮಾತ್ರ ಎನ್’ಸಿಪಿ ನಾಯಕ ದೇಶ್’ಮುಖ್  ಜೈಲಿನಲ್ಲಿದ್ದಾರೆ.

Join Whatsapp