Home ಟಾಪ್ ಸುದ್ದಿಗಳು ಮಾಜಿ ಗೃಹ ಸಚಿವ ಅನಿಲ್ ದೇಶ್’ಮುಖ್ ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಮಾಜಿ ಗೃಹ ಸಚಿವ ಅನಿಲ್ ದೇಶ್’ಮುಖ್ ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಮುಂಬೈ: ಮಹಾರಾಷ್ಟ್ರದಲ್ಲಿ ಪೊಲೀಸ್ ವರ್ಗಾವಣೆ ಮತ್ತು ಪೋಸ್ಟಿಂಗ್’ನಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣವೊಂದರಲ್ಲಿ ಬಂಧಿತರಾಗಿದ್ದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್’ಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಸ್.ಕಾರ್ಣಿಕ್ ಅವರ ಪೀಠವು ಈ ಆದೇಶ ನೀಡಿದೆ. ಆದರೆ ಸಿಬಿಐ ಸುಪ್ರೀಂ ಕೋರ್ಟ್ ಗೆ ಹೋಗುವುದಾಗಿ ಹೇಳಿದ್ದರಿಂದ ಅದನ್ನು 10 ದಿನಗಳ ಕಾಲ ತಡೆಹಿಡಿಯಲಾಗಿದೆ.

ಈ ಹಿಂದೆ, ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಈಗಾಗಲೇ ದೇಶ್’ಮುಖ್’ಗೆ ಜಾಮೀನು ನೀಡಿದೆ. ಆದರೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಮಾತ್ರ ಎನ್’ಸಿಪಿ ನಾಯಕ ದೇಶ್’ಮುಖ್  ಜೈಲಿನಲ್ಲಿದ್ದಾರೆ.

Join Whatsapp
Exit mobile version