ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

Prasthutha|

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ 2014 ರಲ್ಲಿ ಆರೆಸ್ಸೆಸ್ ಕಾರ್ಯಕರ್ತ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಇಂದು ವಜಾಗೊಳಿಸಿದೆ.

- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ ಭಾಷಣದಲ್ಲಿ ಮಹಾತ್ಮ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂಬ ಹೇಳಿಕೆಯನ್ನು ನೀಡಿದ ಹಿನ್ನೆಲೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತ ರಾಜೇಶ್ ಕುಂಟೆ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಇಂದು ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣದಲ್ಲಿ ರಾಹುಲ್ ಗಾಂಧಿಯ ಭಾಷಣದ ಪ್ರತಿಯನ್ನು ಸಾಕ್ಷಿಯಾಗಿ ಪರಿಗಣಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಬಾಂಬೆ ಮ್ಯಾಜಿಸ್ಟ್ರೇಟ್ ಕೋರ್ಟ್ 2018ರಲ್ಲಿ ವಜಾಗೊಳಿಸಿತ್ತು. ಈ ಮಧ್ಯೆ ಮ್ಯಾಜಿಸ್ಟ್ರೇಟ್ ನ ಆದೇಶವನ್ನು ಪ್ರಶ್ನಿಸಿ ರಾಜೇಶ್ ಕುಂಟೆ ಬಾಂಬೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

- Advertisement -

ಪ್ರಸಕ್ತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಿತೆ ಡೆರೆ ನೇತೃತ್ವದ ಬಾಂಬೆ ಹೈಕೋರ್ಟ್ ನ ಏಕಸದಸ್ಯ ಪೀಠ ಇಂದು ಈ ಅರ್ಜಿಯನ್ನು ವಜಾಗೊಳಿಸಿದೆ.

Join Whatsapp