ಪುದುಚೇರಿಯಲ್ಲಿ ‘ಬಾಂಬೆ ಮಿಠಾಯಿ’ ನಿಷೇಧ

Prasthutha|

ನವದೆಹಲಿ: ಬಾಂಬೆ ಮಿಠಾಯಿ (ಕಾಟನ್ ಕ್ಯಾಂಡಿ)ಯನ್ನು ಪುದುಚೇರಿಯಲ್ಲಿ ನಿಷೇಧಿಸಲಾಗಿದೆ. ಅದರಲ್ಲಿ ಆರೋಗ್ಯಕ್ಕೆ ಹಾನಿಕರ¬ವಾದ ರೊಡಮೈನ್-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿ-ರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹಾಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್ ಗವರ್ನರ್ ತಮಿಳ್ ಸಾಯಿ ಸುಂದರರಾಜನ್ ಹೇಳಿದ್ದಾರೆ.

- Advertisement -


ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಶುಕ್ರವಾರ ಹೊರಡಿಸಿದ ಆದೇಶದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಮಾರಾಟವಾಗುತ್ತಿದ್ದ ಕಾಟನ್ ಕ್ಯಾಂಡಿಯಲ್ಲಿ ‘ರೋಡಮೈನ್-ಬಿ’ ಎಂಬ ಹಾನಿಕಾರಕ ರಾಸಾಯನಿಕ ಅಂಶವನ್ನು ಪರೀಕ್ಷಿಸಿದಾಗ ಕಂಡುಬಂದಿದೆ. ಇದರ ಬೆನ್ನಲ್ಲೇ ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

Join Whatsapp