ಕೋವಿಡ್ ರೂಪಾಂತರಿ ಆತಂಕ | ಸಂಜೆ ಮಹತ್ವದ ಸಭೆ ಕರೆದ ಬೊಮ್ಮಾಯಿ

Prasthutha|

ಬೆಂಗಳೂರು: ಜಾಗತಿಕವಾಗಿ ಕೋವಿಡ್ ರೂಪಾಂತರಿ ಆತಂಕ ಸೃಷ್ಟಿಸುತ್ತಿದ್ದಂತೆ ಇತ್ತ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವು ಆಯಾ ರಾಜ್ಯಗಳಿಗೆ ಸೂಚನೆಯನ್ನು ನೀಡಿದೆ. ರೂಪಾಂತರಿಯು ರಾಜ್ಯದಲ್ಲೂ ಹಬ್ಬುವ ಸಾಧ್ಯತೆಯಿರುವುದರಿಂದ ಹಾಗೂ ರಾಜ್ಯದ ಅನೇಕ ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗಿ ವಕ್ಕರಿಸಿರುವ ಹಿನ್ನೆಲೆಯಲ್ಲಿ ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಅಧಿಕಾರಿಗಳು ಮತ್ತು ತಜ್ಞರ ಸಭೆ ಕರೆದಿದ್ದಾರೆ.

- Advertisement -

ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ 4 ಗಂಟೆಗೆ ಸಭೆ ಕರೆದಿದ್ದು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಕೋವಿಡ್ ಉಲ್ಭಣಿಸಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಬಿಬಿಎಂಪಿಯ ಮುಖ್ಯ ಆಯುಕ್ತರು, ಆರೋಗ್ಯ ಇಲಾಖೆ ಆಯುಕ್ತರು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥರು, ವೈದ್ಯಕೀಯ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯ ಆಯುಕ್ತರು ಮತ್ತು ಅಧಿಕಾರಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿದ್ದು ಕೋವಿಡ್ 3ನೇ ಅಲೆ ಏಳುವ ಸಾಧ್ಯತೆ ನಿಚ್ಛಳವಾಗಿರುವುದರಿಂದ ಉಲ್ಬಣವಾಗದಂತೆ ಕ್ರಮ ಕೈಗೊಳ್ಳಲು ಇಂದಿನ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿ ಮಾರ್ಗಸೂಚಿಗಳನ್ನು ಹೊರಡಿಸುವ ಸಾಧ್ಯತೆಯಿದೆ. ಅಧಿಕಾರಿಗಳು, ತಜ್ಞರ ಜೊತೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ಜನತೆಗೆ ತಿಳಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.



Join Whatsapp