ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ ಬೊಮ್ಮಾಯಿ ಸರಕಾರದ ಹಗರಣ: ಶಿಕ್ಷಣ ಸಚಿವ ರಾಜೀನಾಮೆ ನೀಡಲಿ ಕ್ಯಾಂಪಸ್ ಫ್ರಂಟ್

Prasthutha|

ಬೆಂಗಳೂರು: ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರಕಾರದಿಂದ ವಿತರಿಸುವ ಸಮವಸ್ತ್ರದಲ್ಲಿ ಬಹು ಕೋಟಿಯ ಹಗರಣ ಬೆಳಕಿಗೆ ಬಂದಿದ್ದು ಇದು ಶಿಕ್ಷಣ ಸಚಿವರ ಕಮಿಷನ್ ದಂಧೆಯಾಗಿದೆ. ನಿರಂತರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜೀನಾಮೆ ನೀಡಬೇಕು ಎಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿಯು ಒತ್ತಾಯಿಸುತ್ತಿದೆ.

- Advertisement -

 ಆರ್ ಟಿಇ ಕಾಯ್ದೆಯಡಿ ಬರುವ ವಿದ್ಯಾರ್ಥಿಗಳಿಗೆ 2019 ರ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಲ್ಲಿ ಸರಕಾರವು ಹೊಲಿದ ಸಮವಸ್ತ್ರ ನೀಡಬೇಕೆಂದು ಹೇಳಿದೆ. ಈ ಹಿಂದೆ ಖಾಸಗಿ ಸಂಸ್ಥೆಗಳ ಮೂಲಕ ಸರಕಾರ ನೀಡಿದ್ದ ಟೆಂಡರ್ ಪ್ರಕಾರ ಕೇವಲ 230 ರೂ.ಗೆ ಹೊಲಿದ ಎರಡು ಜೊತೆ ಸಮವಸ್ತ್ರ ಜೊತೆಗೆ ಶೂ, ಸೋಕ್ಸ್ ಹಾಗೂ ಟೈ ಕೂಡ ಎಸ್ ಡಿಎಂಸಿ ಮುಖಾಂತರ ವಿತರಣೆ ಮಾಡಲಾಗಿತ್ತು. ಇದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಉದ್ಯೋಗವಾಗುತ್ತಿದ್ದು, ಆದರೆ ಇದೀಗ ಸರಕಾರವು ಎಸ್ ಡಿಎಂಸಿಯನ್ನು ಕಡೆಗಣಿಸಿ, ಕೇವಲ ಕಮಿಷನ್ ವ್ಯಾವೋಹದಿಂದ ಮಹಾರಾಷ್ಟ್ರ ಮೂಲದ ಕಂಪೆನಿಗೆ ಟೆಂಡರ್ ನೀಡಿ 250 ರೂ ಗಳಂತೆ ಹೊಲಿಯದ ಬಟ್ಟೆಯನ್ನು ನೀಡಲು ಮುಂದಾಗಿದೆ. ಈ ಮುಖಾಂತರ ಬಹು ಕೋಟಿಯ ಹಗರಣ ನಡೆದಿದೆ ಎಂದು ಅಂದಾಜಿಸಲಾಗಿದೆ. ಶಿಕ್ಷಣ ಸಚಿವರು ಈ ಹಗರಣದ ಹಿಂದೆ ಕಮಿಷನ್ ದಂಧೆ ನಡೆಸುತ್ತಿದ್ದು ಉಚ್ಚ ನ್ಯಾಯಾಲಯದ ತೀರ್ಪನ್ನು ಕೂಡ ಪರಿಗಣಿಸದೆ ನ್ಯಾಯಾಲಯದ ನಿಂದನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ ಕಮಿಷನ್ ದಂಧೆ ನಡೆಸಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಶಿಕ್ಷಣ ಸಚಿವರು ಶೀಘ್ರ ರಾಜೀನಾಮೆ ನೀಡಬೇಕೆಂದು ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ ಆಗ್ರಹಿಸಿದ್ದಾರೆ.

Join Whatsapp