ಬಿಜೆಪಿಗೆ ಹೀನಾಯ ಸೋಲುಣಿಸಿದ ಬೊಮ್ಮಾಯಿಗೆ ನೈತಿಕ ಹಕ್ಕು ಇಲ್ಲ: ಎಂ.ಬಿ ಪಾಟೀಲ್

Prasthutha|

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಸಚಿವ ಎಂ.ಬಿ ಪಾಟೀಲ್ ಶುಕ್ರವಾರ ತಿರುಗೇಟು ನೀಡಿದರು.

- Advertisement -

ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ 135 ಸೀಟುಗಳು ಬಂದಿರುವುದರಲ್ಲಿ ಬೊಮ್ಮಾಯಿ ಅವರ ಕೊಡುಗೆಯೂ ಇದೆ ಎಂದರು.

ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದಾಗ ಬುದ್ಧಿವಂತರೊಬ್ಬರು ಆ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆಂದು ನಾವೂ ಖುಷಿಪಟ್ಟಿದ್ದೆವು. ಆದರೆ, ಅದನ್ನು ಉಳಿಸಿಕೊಳ್ಳಲು ಅವರಿಗೆ ಆಗಲಿಲ್ಲ ಎಂದು ಟೀಕಾಸ್ತ್ರ ಪ್ರಯೋಗಿಸಿದರು.



Join Whatsapp