ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆದುಕೊಂಡಿರುವ ರೀತಿಯನ್ನು ಕಾಂಗ್ರೆಸ್ ಖಂಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಪ್ರಿಯಾಂಕ್ ಖರ್ಗೆ ನಮ್ಮ ರಾಜ್ಯದ ಮುಖ್ಯಮಂತ್ರಿ ಯಾರು ಎಂದು ಗಂಭೀರವಾಗಿ ಪ್ರಶ್ನಿಸಿದರು. ‘ಎಲ್ಲದಕ್ಕೂ ಮೂಗ ಬಸವನ ರೀತಿ ಇರ್ತೀರಿ. ನಿಮಗಿಂತ ಚಕ್ರತೀರ್ಥ ದೊಡ್ಡವರಾದ್ರಾ. ಬಸವ, ಬುದ್ಧ, ಅಂಬೇಡ್ಕರ್ಗೆ ಅವರು ಅವಮಾನ ಮಾಡಿದ್ದಾನೆ. ನಾರಾಯಣಗುರು, ನಾಡಗೀತೆಗೆ ಅವಮಾನ ಮಾಡಿದ್ದಾನೆ. ಯಾಕೆ ನೀವು ಅವನ ಮೇಲೆ ಕ್ರಮ ಜರುಗಿಸಲಿಲ್ಲ ಎಂದು ಪ್ರಶ್ನಿಸಿದರು
ಪಿಎಸ್ಐ ಹಗರಣ ನಡೆದಾಗ ಸುಮ್ಮನಿದ್ದಿರಿ. ಉಪನ್ಯಾಸಕರ ನೇಮಕಾತಿ ಹರಗಣ ನಡೆದರೂ ಸುಮ್ಮನಿದ್ದಿರಿ. ಶ್ರೀರಾಮಸೇನೆ ನಿಮ್ಮ ಗಂಡಸ್ತನದ ಬಗ್ಗೆ ಪ್ರಶ್ನೆ ಮಾಡುತ್ತೆ. ನಿಮಗೆ ಡೇಟ್ ಮೇಲೆ ಡೇಟ್ ಕೊಡ್ತಾರೆ. ಯಾಕೆ ಯಾರ ಮೇಲೂ ಕ್ರಮ ತೆಗೆದುಕೊಳ್ಳುತ್ತಿಲ್ಲ. ನಿಮ್ಮ ಪ್ರಕಾರ ರೋಹಿತ್ ಚಕ್ರತೀರ್ಥ ಪ್ರಶ್ನಾತೀತರೇ? ನಿಮಗೆ ರೋಹಿತ್ ಬೇಕು. ವಿದ್ಯಾರ್ಥಿಗಳು ಮುಖ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಗೊಂದಲವಿದ್ದರೆ ಪರಿಶೀಲನೆ ಮಾಡುವುದಾಗಿ ಸಿಎಂ ಹೇಳುತ್ತಾರೆ. ಈಗ ಪರಿಷ್ಕರಣ ಸಮಿತಿ ವಿಸರ್ಜಿಸಿದ್ದೀರಿ. ಪುಸ್ತಕಗಳು ಈಗಾಗಲೇ ಮುದ್ರಣವಾಗಿದ್ದು, ಬಿಇಒ ಕಚೇರಿಗೆ ತಲುಪಿವೆ. ಸಮಿತಿಯೇ ಇಲ್ಲ ಅಂದರೆ ಪರಿಶೀಲನೆ ಹೇಗೆ ಸಾಧ್ಯ? ಎಂದು ತರಾಟೆಗೆ ತೆಗೆದುಕೊಂಡ್ಡಿದ್ದಾರೆ.