ಬೊಮ್ಮಾಯಿ- ಪಿಣರಾಯಿ ಮಾತುಕತೆ; ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಮಹತ್ವದ ಸಭೆ

Prasthutha|

ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಯಜನ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹೂಗುಚ್ಚ ನೀಡಿ ಸ್ವಾಗತಿಸಿದರು.

- Advertisement -

ತಿರುವನಂತಪುರದಲ್ಲಿ ಇತ್ತೀಚೆಗೆ ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳನ್ನೊಳಗೊಂಡ ದಕ್ಷಿಣ ವಲಯದ ಸಮಿತಿ ಸಭೆ ನಡೆಸಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿದೆ. ಎರಡು ರೈಲು ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ’ ಎಂದು ಕೇರಳ ಮುಖ್ಯಮಂತ್ರಿಯವರ ಕಾರ್ಯಾಲಯ ಹೇಳಿದೆ.

ಈ ಸಂದರ್ಭದಲ್ಲಿ ವಸತಿ ಸಚಿವ ವಿ ಸೋಮಣ್ಣ, ಕೇರಳ ಹಾಗೂ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.

- Advertisement -

ತಲಶ್ಶೇರಿ–ಮೈಸೂರು ಹಾಗೂ ನಿಲಂಬೂರು–ನಂಜನಗೂಡು ರೈಲ್ವೆ ಯೋಜನೆಯ ಅನುಷ್ಠಾನದ ಕುರಿತು ಉಭಯ ನಾಯಕರು ಚರ್ಚಿಸುವ ನಿರೀಕ್ಷೆ ಇದೆ. ತಿರುವನಂತಪುರ–ಕಾಸರಗೋಡು ಸೆಮಿ ಹೈ–ಸ್ಪೀಡ್‌ ರೈಲು ಮಾರ್ಗ ಹಾಗೂ ಸಿಲ್ವರ್‌ ಮಾರ್ಗವನ್ನು ಮಂಗಳೂರಿನವರೆಗೂ ವಿಸ್ತರಿಸುವ ಸಂಬಂಧ ಕೇರಳ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿದ್ದು, ಈ ಕುರಿತೂ ಚರ್ಚೆ ನಡೆಸಿರುವ  ಸಾಧ್ಯತೆ ಇದೆ ಎನ್ನಲಾಗಿದೆ.

Join Whatsapp