ಬೆಂಗಳೂರು: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿಯವರು ಸರ್ಕಾರದ ಕುರಿತು ನೀಡಿರುವ ಹೇಳಿಕೆ ಬಗ್ಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಸಚಿವರು ಅದನ್ನು ಬೇರೆ ಸಂದರ್ಭದಲ್ಲಿ ಹೇಳಿದ್ದಾರೆ. ಅವರ ಬಳಿ ನಾನು ಮಾತನಾಡಿದ್ದೇನೆ. ಆದ್ದರಿಂದ ಯಾವುದೇ ತಪ್ಪು ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ. ಮೂರು ತಿಂಗಳ ಹಿಂದೆ ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯಕ್ರಮದಲ್ಲಿ ಮಾತನಾಡಿದ್ದು ಅದು. ಸರ್ಕಾರದಲ್ಲಿ ಎಲ್ಲವೂ ಸರಿ ಇದೆ. ಏನೂ ತೊಂದರೆ ಇಲ್ಲ ಎಂದರು.
ಶಿವಮೊಗ್ಗ ಪ್ರಕರಣ: ಕಟ್ಟುನಿಟ್ಟಿನ ತನಿಖೆಗೆ ಆದೇಶ
ಸ್ವಾತಂತ್ರ್ಯೋತ್ವದ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ನಿನ್ನೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಕ್ರಿಯೆ ನಡೆಯುವಾಗ ನಾವು ಹೇಳಿಕೆ ನೀಡುವುದು ಸರಿಯಲ್ಲ. ಕಾನೂನಿನ ಪ್ರಕಾರ ಕಟ್ಟುನಿಟ್ಟಿನ ತನಿಖೆ ಮಾಡಲು ಆದೇಶಿಸಲಾಗಿದೆ. ಪೊಲೀಸರು ತಮ್ಮ ಕರ್ತವ್ಯ ಮಾಡಲಿದ್ದಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.