ಮೋದಿ ಮುಖ ತೋರಿಸಿದರೂ ಓಟು ಬರಲ್ಲ ಎಂದು ಚಿತ್ರನಟರ ಮುಂದೆ ಶರಣಾದ ಬೊಮ್ಮಾಯಿ: ಕಾಂಗ್ರೆಸ್

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಬಲಿಸಿ ಪ್ರಚಾರ ಮಾಡುತ್ತೇನೆ ಎಂದು ನಟ ಸುದೀಪ್ ಘೋಷಣೆ ಬೆನ್ನಲ್ಲೇ ಟ್ವೀಟ್ ಮಾಡಿರುವ ಕಾಂಗ್ರೆಸ್, ಮೋದಿ ಮುಖ ತೋರಿಸಿದರೂ ಓಟು ಬರಲ್ಲ ಎಂದು ಚಿತ್ರನಟರ ಮುಂದೆ ಸಿಎಂ ಬೊಮ್ಮಾಯಿ ಶರಣಾಗಿದ್ದಾರೆ ಎಂದು ವ್ಯಂಗ್ಯವಾಡಿದೆ.

- Advertisement -

ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ ಬಸವರಾಜ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ. ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ” ಎಂದು ಕಾಂಗ್ರೆಸ್ ಟೀಕಿಸಿದೆ.

Join Whatsapp