ಕಾಂಗ್ರೆಸ್ ಪಕ್ಷ SDPI, PFI ಕಪಿಮುಷ್ಟಿಯಲ್ಲಿದೆ: ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು: ಕಾಂಗ್ರೆಸ್ ಪಕ್ಷ ಎಸ್.ಡಿ.ಪಿ.ಐ ಹಾಗೂ ಪಿಎಫ್ಐ ಕಪಿಮುಷ್ಟಿಯಲ್ಲಿದ್ದು, ಅದರಿಂದ ಹೊರಬರಲು ಸಾಧ್ಯವಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

- Advertisement -


ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ವರ್ತಿಸುತ್ತಿದೆ. ನಾವು ಎಸ್.ಡಿ.ಪಿ.ಐ, ಪಿಎಫ್ ಐ ವಿರುದ್ಧ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ ಎಂದರು.


ಪಿ.ಎಫ್.ಐ. ನ ಇನ್ನೊಂದು ರೂಪ ಎಸ್.ಡಿ.ಪಿ.ಐ ಬೆಂಬಲವನ್ನು ಕಾಂಗ್ರೆಸ್ ಬಹಿರಂಗವಾಗಿ ಕೇಳಿತ್ತು. ಆದರೆ ಅವರು ಕೊಡುವುದಿಲ್ಲ ಎಂದಿದ್ದಾರೆ. ಕಾಂಗ್ರೆಸ್ ನ ಕಾಲದಲ್ಲಿ ಎಸ್.ಡಿ.ಪಿ.ಐ., ಪಿ.ಎಫ್.ಐ ಪ್ರಬಲವಾಗಿ ಬೆಳೆದಿದ್ದವು. ಸದ್ಯ ಬಾಲವೇ ದೇಹವನ್ನು ಅಲುಗಾಡಿಸುವ ಸ್ಥಿತಿ ಇದೆ. ಎಸ್.ಡಿ.ಪಿ.ಐ ಬಿಜೆಪಿಯ ಬಿ. ಟೀಂ ಅಲ್ಲ. ಬಿ ಟೀಂ ಆಗಿದ್ದರೆ ನಾವು ಪಿ.ಎಫ್.ಐ ಬ್ಯಾನ್ ಮಾಡುತ್ತಿದ್ದವಾ? ತಾವು ಮಾಡಿದ ತಪ್ಪನ್ನು ಮುಚ್ಚಲು ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.