ಸಾಕ್ಷ್ಯಾಧಾರ ಸಂಗ್ರಹಿಸಿ ಅಪರಾಧ ಪತ್ತೆಗೆ ಹೊಸದಾಗಿ ಪರಿಶೀಲನಾ ಅಧಿಕಾರಿ ಹುದ್ದೆ ಸೃಷ್ಟಿ: ಬೊಮ್ಮಾಯಿ

Prasthutha|

ಬೆಂಗಳೂರು : ಅಪರಾಧ ಕೃತ್ಯ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ, ಸೂಕ್ಷ್ಮಾತಿ ಸೂಕ್ಷ್ಮ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಅಪರಾಧವನ್ನು ಪತ್ತೆ ಮಾಡಲು ದೇಶದಲ್ಲೇ ಮೊದಲ ಬಾರಿಗೆ ನುರಿತ ಹಾಗೂ ಪರಿಣಿತರ ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಯನ್ನು ಸೃಷ್ಟಿ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -


ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಹುದ್ದೆಗಳ ಆದೇಶ ಪ್ರತಿಯನ್ನು ನೀಡಲಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಅಪರಾಧ ಕೃತ್ಯಗಳ ತನಿಖೆಗೆ ಈ ರೀತಿ ಹೊಸ ಪೊಲೀಸ್ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


ಯಾವುದಾದರು ಅಪರಾಧ ಕೃತ್ಯ ನಡೆದ ತಕ್ಷಣ ಘಟನಾ ಸ್ಥಳಕ್ಕೆ ಹೋಗಿ ಸಾಕ್ಷ್ಯಾಧಾರಗಳನ್ನು ವೈಜ್ಞಾನಿಕವಾಗಿ, ಸುರಕ್ಷಿತವಾಗಿ ಸಂರಕ್ಷಣೆ ಮಾಡಲು ಈ ವಿಶೇಷ ಅಧಿಕಾರಿಗಳನ್ನು ನೇಮಿಸಲಾಗಿದೆ. ಮೊದಲ ಹಂತವಾಗಿ 206 ಮಂದಿ ನುರಿತ ಅಧಿಕಾರಿಗಳ ಹುದ್ದೆಗಳನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Join Whatsapp