ವೈದ್ಯಕೀಯ ಸಿಬ್ಬಂದಿಗೆ ಜನವರಿ 10ರಿಂದ ‘ಬೂಸ್ಟರ್ ಡೋಸ್: ಪ್ರಧಾನಿ ಮೋದಿ ಘೋಷಣೆ

Prasthutha|

ನವದೆಹಲಿ: ವೈದ್ಯಕೀಯ ಸಿಬ್ಬಂದಿ ಹಾಗೂ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ ಜನವರಿ 10ರಿಂದ ‘ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಶನಿವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಭಾರತದಲ್ಲಿನ ವೈದ್ಯಕೀಯ ಸಿಬ್ಬಂದಿಗೆ ಕೊವಿಡ್-19 ಬೂಸ್ಟರ್ ಡೋಸ್ ಲಸಿಕೆಯನ್ನು ನೀಡಲು ಪ್ರಾರಂಭಿಸಲಾಗುವುದು ಎಂದು ಹೇಳಿದರು.

- Advertisement -

ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವಿಕೆ ಭೀತಿ ನಡುವೆ ಮುಂದಿನ ಜನವರಿ 3ರಿಂದ ಭಾರತದಲ್ಲಿ 15 ವರ್ಷದಿಂದ 18 ವರ್ಷದ ಮಕ್ಕಳಿಗೂ ಕೊರೊನಾ ವೈರಸ್ ಲಸಿಕೆಯನ್ನು ನೀಡಲಾಗುವುದು ಎಂದುಪ್ರಧಾನಿ ಮೋದಿ ಘೋಷಿಸಿದರು.

ಪ್ರಧಾನಿ ಮೋದಿ ಭಾಷಣದ ಪ್ರಮುಖ ಅಂಶಗಳು:
* ಕೊರೊನಾವೈರಸ್ ಹೊಸ ಓಮಿಕ್ರಾನ್ ರೂಪಾಂತರದಿಂದಾಗಿ ಪ್ರಪಂಚದ ಅನೇಕ ದೇಶಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ಯಾರೂ ಭಯ ಪಡಬೇಡಿ, ಆದರೆ ಜಾಗರೂಕರಾಗಿರಿ ಮತ್ತು ನಿಯಮಿತವಾಗಿ ಮಾಸ್ಕ್ ಅನ್ನು ಬಳಸಿ ಮತ್ತು ಕೈಗಳನ್ನು ಸ್ವಚ್ಛಗೊಳಿಸಿ.
* ಭಾರತವು 18 ಲಕ್ಷ ಪ್ರತ್ಯೇಕ ಹಾಸಿಗೆಗಳು, 5 ಲಕ್ಷ ಆಮ್ಲಜನಕ ಬೆಂಬಲಿತ ಹಾಸಿಗೆಗಳು, 1.40 ಲಕ್ಷ ICU ಹಾಸಿಗೆಗಳು, 90,000 ಮಕ್ಕಳ ICU ಮತ್ತು ICU ಅಲ್ಲದ ಹಾಸಿಗೆಗಳನ್ನು ಹೊಂದಿದೆ. ನಮ್ಮಲ್ಲಿ 3,000ಕ್ಕೂ ಹೆಚ್ಚು ಪಿಎಸ್‌ಎ ಆಮ್ಲಜನಕ ಘಟಕಗಳಿವೆ, ರಾಷ್ಟ್ರದಾದ್ಯಂತ 4 ಲಕ್ಷ ಆಮ್ಲಜನಕ ಸಿಲಿಂಡರ್‌ಗಳನ್ನು ವಿತರಿಸಲಾಗಿದೆ.
* ಕೋವಿಡ್ 19ರ ಗಂಭೀರತೆಯನ್ನು ಅರಿತು ಇಂದು ಭಾರತದಲ್ಲಿ 141 ಕೋಟಿಗೂ ಹೆಚ್ಚು ಡೋಸ್‌ಗಳನ್ನು ನೀಡಲಾಗಿದೆ. ಶೇಕಡಾ 90ಕ್ಕಿಂತ ಹೆಚ್ಚು ಅರ್ಹ ಜನರಿಗೆ ಮೊದಲ ಡೋಸ್ ಲಸಿಕೆ ಹಾಕಲಾಗಿದೆ.
* ಜನವರಿ 3ರಿಂದ 15 ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ಕೊರೊನಾವೈರಸ್ ಲಸಿಕೆ ವಿತರಣೆಯನ್ನು ಆರಂಭಿಸಲಾಗುವುದು.
* ತೀವ್ರ ಅಸ್ವಸ್ಥತೆಯನ್ನು ಹೊಂದಿರುವ 60 ವರ್ಷ ಮೇಲ್ಪಟ್ಟ ವೃದ್ಧರು ವೈದ್ಯರ ಶಿಫಾರಸ್ಸಿನ ಮೇಲೆ ಕೊವಿಡ್-19 ಬೂಸ್ಟರ್ ಡೋಸ್ ಅನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.

- Advertisement -


Join Whatsapp