ಬೆಂಗಳೂರು: ಸಾಕಷ್ಟು ಬೆಲೆ ಏರಿಕೆಗಳನ್ನು ಕಂಡಿದ್ದ ಚಿನ್ನಪ್ರಿಯರಿಗೆ ಇವತ್ತು ಶುಕ್ರವಾರ ಖುಷಿಯ ಸುದ್ದಿ ಇದೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ಇಳಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್ಗೆ 40 ರೂನಷ್ಟು ಕಡಿಮೆ ಆದರೆ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೊಮ್ಮೆ 8,300 ರೂ ಗಡಿ ಒಳಗೆ ಬಂದಿದೆ. ಅಪರಂಜಿ ಚಿನ್ನದ ಬೆಲೆ 9,022 ರೂಗೆ ಇಳಿಕೆ ಆಗಿದೆ. ಬೆಳ್ಳಿ ಬೆಲೆಯಂತೂ ಗ್ರಾಮ್ಗೆ ಎರಡು ರೂನಷ್ಟು ಕುಗ್ಗಿದೆ.
ಬೆಂಗಳೂರಿನಲ್ಲಿ 105 ರೂ ಇದ್ದ ಅದರ ಬೆಲೆ 103 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 114 ರೂನಿಂದ 112 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 82,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 90,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 82,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,300 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 21ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,220 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,670 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,030 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,220 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,030 ರೂ