ಮಡಿಕೇರಿ: ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹೊಡೆದು ಬಾಲಕನನ್ನು ಹತ್ಯೆ ಮಾಡಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಬಾಲಕ ಆರೋಪಿಯ ಮನೆಗೆ ಹೋಗಿದ್ದಾಗ ಈ ಘಟನೆ ನಡೆದಿದ್ದು, ಮೃತ ಬಾಲಕ ಆರೋಪಿಯ ಮಗಳನ್ನು ಪ್ರೀತಿಸುತ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ.
ನಿನ್ನೆ ತಡರಾತ್ರಿ ಆರೋಪಿ ಮನೆಗೆ 16 ವರ್ಷದ ಬಾಲಕ ತೆರಳಿದ್ದನು. ಈ ವೇಳೆ, ಆರೋಪಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾನೆ.