ದಾವಣಗೆರೆ: ಜೋಕಾಲಿ ಆಡುತ್ತಿದ್ದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ.
ಪಿ.ಜೆ ಕೊಟ್ರೇಶ್ (14) ಮೃತ ಬಾಲಕ.
ಈತ ಖಾಸಗಿ ಶಾಲೆಯಲ್ಲಿ 8 ನೇ ತರಗತಿ ಓದುತ್ತಿದ್ದನು. ಈತ ಶಾಲೆ ಮುಗಿಸಿ ಬಂದು ಮನೆಯಲ್ಲಿ ಜೋಕಾಲಿಯಲ್ಲಿ ಕುಳಿತು ಆಟವಾಡುತ್ತಿದ್ದನು. ಹೀಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಜೋಕಾಲಿ ಹಗ್ಗವು ಆಕಸ್ಮಿಕವಾಗಿ ಕೊರಳಿಗೆ ಸುತ್ತಿಕೊಂಡಿದೆ. ಪರಣಾಮ ಹಗ್ಗ ಬಿಗಿಯಾಗಿ ಬಾಲಕನಿಗೆ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.