Home ಟಾಪ್ ಸುದ್ದಿಗಳು ರಾಯಚೂರು | ಕಲುಷಿತ ನೀರು ಸೇವಿಸಿ ಬಾಲಕ ಸಾವು: 30ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಯಚೂರು | ಕಲುಷಿತ ನೀರು ಸೇವಿಸಿ ಬಾಲಕ ಸಾವು: 30ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಯಚೂರು: ಕಲುಷಿತ ನೀರು ಸೇವಿಸಿ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.
30 ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ.


ನೀರು ಸರಬರಾಜು ಮಾಡುವ ಪೈಪ್ ಲೈನ್ ಗೆ ಚರಂಡಿ ನೀರು ಸೇರುತ್ತಿದ್ದು ಕಳೆದ 2-3 ದಿನಗಳಿಂದ ಜನರು ಅಸ್ವಸ್ಥರಾಗುತ್ತಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ 5 ವರ್ಷದ ಬಾಲಕ ಹನುಮೇಶ್ ಸಾವನ್ನಪ್ಪಿದ್ದಾನೆ. ಮಕ್ಕಳು, ಮಹಿಳೆಯರು ಸೇರಿ 30 ಕ್ಕೂ ಹೆಚ್ಚು ಜನ ವಾಂತಿ ಭೇದಿಯಿಂದ ರಾಯಚೂರಿನ ರಿಮ್ಸ್, ಅರಕೇರಾ, ದೇವದುರ್ಗದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

Join Whatsapp
Exit mobile version