ಬೆಳಗಾವಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ.
ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತ ಬಾಲಕ. ಬೈಕ್ ನಲ್ಲಿ ತಂದೆ ಜೊತೆ ತೆರಳುತ್ತಿದ್ದ ವೇಳೆ ದುರಂತ ನಡೆದಿದೆ.
ಹಬ್ಬಕ್ಕೆ ಹೊಸಬಟ್ಟೆ ಖರೀದಿಸಲು ತಂದೆ ಜೊತೆ ಬಂದಿದ್ದ ಬಾಲಕ ಹಳೆ ಗಾಂಧಿ ನಗರದ ಬ್ರಿಡ್ಜ್ ಮೇಲೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಮಾಂಜಾ ದಾರ ಕುತ್ತಿಗೆಗೆ ತಗುಲಿ ಗಂಭೀರ ಗಾಯಗೊಂಡಿದ್ದಾನೆ.
ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಮಾಳ ಮಾರುತಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.