ಶಾಲೆಗೆ ತೆರಳಿದ ಬಾಲಕ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

Prasthutha|

ರಾಯಚೂರು: ಶಾಲೆಗೆ ತೆರಳಿದ್ದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಲಿಂಗಸಗೂರು ತಾಲೂಕಿನ ಅನ್ವರಿ ಗ್ರಾಮದಲ್ಲಿ ನಡೆದಿದೆ‌.

- Advertisement -


ಖಾಸಗಿ ಶಾಲೆಯೊಂದರ 8ನೇ ತರಗತಿಯ ವಿದ್ಯಾರ್ಥಿಯಾಗಿರುವ ಈತನನ್ನು ಶಾಲೆಗೆ ತೆರಳಲು ಅನುಕೂಲವಾಗಲಿ ಎಂದು ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ಬಾಲಕನನ್ನು ಪೋಷಕರು ಬಿಟ್ಟಿದ್ದರು.


ಬಾಲಕನಿಗೆ ಶಾಲೆಗೆ ಹೋಗಲು ಇಷ್ಟ ಇರಲಿಲ್ಲ. ಇದರಿಂದಾಗಿ ಶಾಲೆಗೆ ಹೋಗುವುದಾಗಿ ತಿಳಿಸಿ ಸಂಬಂಧಿಕರ ಮನೆಯಿಂದ ಹೊರಟ ಬಾಲಕ ಡೋಣಮರಡಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

- Advertisement -


ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ.

Join Whatsapp