ಕಡಬ: ಸ್ಕೂಟರ್ ಗೆ ಕಾರು ಡಿಕ್ಕಿ, ಬಾಲಕ ಸಾವು

Prasthutha|

ಕಡಬ: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಕಳಾರ ಸಮೀಪ ಶುಕ್ರವಾರ ತಡ ರಾತ್ರಿ ನಡೆದಿದೆ.

- Advertisement -

ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ ,ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ. ತಮ್ಮ ನಿವಾಸಕ್ಕೆ ತಲುಪುವ ಸುಮಾರು ನೂರು‌ ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ಪುಟಾಣಿ ತಂಗಿ ಗಂಭೀರ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.



Join Whatsapp