Home ಟಾಪ್ ಸುದ್ದಿಗಳು ಪರೀಕ್ಷೆಯಲ್ಲಿ ಫೇಲ್ ಆದರೆ ಹೊಡೀತಾರೆ ಎಂದು ತಂದೆಯನ್ನೇ ಕೊಂದ ಬಾಲಕ

ಪರೀಕ್ಷೆಯಲ್ಲಿ ಫೇಲ್ ಆದರೆ ಹೊಡೀತಾರೆ ಎಂದು ತಂದೆಯನ್ನೇ ಕೊಂದ ಬಾಲಕ

ಭೋಪಾಲ್: ಪರೀಕ್ಷೆಯಲ್ಲಿ ಫೇಲ್ ಆದರೆ ಅಪ್ಪ ಥಳಿಸುತ್ತಾರೆ ಎಂಬ ಭಯದಿಂದ 15 ವರ್ಷದ ಬಾಲಕ ತಂದೆಯನ್ನೇ ಕೊಂದಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ.

ದುಲಿಚಂದ್ ಅಹಿರ್ವಾರ್ ಮೃತ ದುರ್ದೈವಿ. ಏಪ್ರಿಲ್ 3 ರಂದು ಕೋಣೆಯಲ್ಲಿ ಮಲಗಿದ್ದಾಗ ದುಲಿಚಂದ್ ಅಹಿರ್ವಾರ್ ಅವರನ್ನು ಬಾಲಕ ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿದ್ದಾನೆ. ನಂತರ ಘಟನಾ ಸ್ಥಳದಿಂದ ಬಾಲಕ ಪರಾರಿಯಾಗುತ್ತಿರುವುದನ್ನು ನೆರೆಮನೆಯ ವೀರೇಂದ್ರ ಅಹಿರ್ವಾರ್ ಮತ್ತು ಇನ್ನೋರ್ವ ವ್ಯಕ್ತಿ ಗಮನಿಸಿದ್ದಾರೆ.

ಬಳಿಕ ಬಾಲಕನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ 10ನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಮನೆಯಿಂದ ಹೊರಗೆ ಹಾಕುವುದಾಗಿ ತನ್ನ ತಂದೆ ಬೆದರಿಕೆ ಹಾಕಿದ್ದರು, ಅಲ್ಲದೇ ಓದಿಲ್ಲ ಅಂದರೆ ಗದರಿಸುತ್ತಿದ್ದರು ಎಂದು ಬಾಲಕ ಹೇಳಿದ್ದಾನೆ. 

Join Whatsapp
Exit mobile version