ಬಿಪಿಎಲ್ ಕಾರ್ಡ್ ನಿಯಮ ಬದಲಾವಣೆಯಿಲ್ಲ : ಉಮೇಶ್ ಕತ್ತಿ ಯೂಟರ್ನ್

Prasthutha|

ಬೆಂಗಳೂರು : ಮನೆಯಲ್ಲಿ ಟಿವಿ, ಬೈಕ್, ಫ್ರಿಜ್ ಇದ್ದರೆ ಅವರ ಬಿಪಿಎಲ್ ಕಾರ್ಡ್ ಅನ್ನು ರದ್ದುಗೊಳಿಸಲಾಗುವುದು ಎಂದಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ, ಸಾರ್ವಜನಿಕರ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಯೂಟರ್ನ್ ತೆಗೆದಯಕೊಂಡಿದ್ದಾರೆ. ಸ್ವಪಕ್ಷದ ಶಾಸಕರಿಂದಲೇ ಈ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು.

- Advertisement -

ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ಮಾನದಂಡಗಳೇ ಮುಂದುವರಿಸಲಾಗುವುದು ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಈ ಸಂಬಂಧ ಅವರು ಮಾಧ್ಯಮ ಪ್ರಕಟನೆ ಪ್ರಕಟಿಸಿದ್ದಾರೆ.

ನಾನು ಸಚಿವನಾದ ನಂತರ ಯಾವುದೇ ತಿದ್ದುಪಡಿ ಮಾಡಿಲ್ಲ. ಬಿಪಿಎಲ್ ಗೆ ಸಂಬಂಧಿಸಿದಂತೆ ಈ ಹಿಂದೆ ಇದ್ದ ಮಾನದಂಡಗಗಳನ್ನೇ ಮುಂದುವರಿಸಲಾಗುತ್ತದೆ ಎಂದು ಕತ್ತಿ ಹೇಳಿದ್ದಾರೆ.

- Advertisement -

ಐದು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು, ಮನೆಯಲ್ಲಿ ಬೈಕ್, ಟಿವಿ ಹೊಂದಿದ್ದವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುವುದು. ಇಂತಹ ಕಾರ್ಡುದಾರರು ತಮ್ಮ ಕಾರ್ಡ್ ಹಿಂದಿರುಗಿಸಲು ಮಾರ್ಚ್ ವರೆಗೆ ಸಮಯ ನೀಡಲಾಗುತ್ತದೆ ಎಂದು ಕತ್ತಿ ಹೇಳಿಕೆ ನೀಡಿದ್ದರು.

Join Whatsapp