ಮಂಗಳೂರು: ನಗರದ ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಕೇರಳ ರಾಜ್ಯದ ಕಣ್ಣೂರು ಮೂಲದ ವಿದ್ಯಾರ್ಥಿನಿ ಸ್ಯಾಂಡ್ರ ಪಿ.ಪಿ. (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ತೃತೀಯ ವರ್ಷದ ಬಿ.ಪಿ.ಟಿ. (ಫಿಶಿಯೋಥೆರಪಿ) ವಿದ್ಯಾರ್ಥಿನಿ ಆಗಿರುವ ಸ್ಯಾಂಡ್ರ ವರ್ಷದ ಹಿಂದೆಯೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈಕೆ ಕಳೆದ ಒಂದು ವರ್ಷದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾಗಿ ತಿಳಿದು ಬಂದಿದೆ.